ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ‘ಶ್ರೇಷ್ಠ ಪುಸ್ತಕ ಪ್ರಶಸ್ತಿ’

1 min read

ಕನ್ನಡದಲ್ಲಿ ವಿಜ್ಞಾನ ವಿಷಯದ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸಲು ಹಾಗೂ ಕನ್ನಡದಲ್ಲಿ ವಿಜ್ಞಾನದ ಪುಸ್ತಕಗಳು ಹೆಚ್ಚು ಹೆಚ್ಚಾಗಿ ಹೊರಬರಲು ಅನುವು ಮಾಡಿಕೊಡುವ ಸಲುವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ 2009-10ನೇ ಸಾಲಿನಿಂದ ‘ಶ್ರೇಷ್ಠ ಪುಸ್ತಕ’ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯನ್ನು ಎರಡು ವರ್ಷಗಳಿಗೊಮ್ಮೆ ಮೇಲ್ಕಂಡ ನಾಲ್ಕು ವಿಭಾಗಗಳಲ್ಲಿ ಆಯ್ದ ಲೇಖಕರಿಗೆ ನೀಡಲಾಗುವುದು. ಆಯ್ಕೆಯಾದ ಪ್ರತೀ ಲೇಖಕರಿಗೆ ರೂ. 25 ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

2022ನೇ ಸಾಲಿನ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 04, 2023

ಈ ಲಿಂಕ್ ಮೂಲಕ ಅರ್ಜಿ ನಮೂನೆ, ಮಾರ್ಗಸೂಚಿ ಮತ್ತು ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿದೆ

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.

Sign In

Register

Reset Password

Please enter your username or email address, you will receive a link to create a new password via email.

Skip to content