ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಅಧ್ಯಕ್ಷರ ಲೇಖನಿಯಿಂದ  

1 min read

ಅಕಾಡೆಮಿಯು ಸೆಪ್ಟೆಂಬರ್ 5 ರಂದು 17 ವರ್ಷಗಳನ್ನು ಪೂರೈಸಿದ್ದು, ರಾಜ್ಯದಲ್ಲಿ ‘ಸಮಾಜಕ್ಕಾಗಿ ವಿಜ್ಞಾನ’ ಎಂಬ ಕಾರ್ಯತಂತ್ರದ ಮೂಲಕ ಗಮನಾರ್ಹ ಕೊಡುಗೆಗಳನ್ನು ನೀಡಿದೆ. ಹಲವಾರು ವರ್ಷಗಳಿಂದ ಅಕಾಡೆಮಿಯೊಂದಿಗೆ ಒಗ್ಗೂಡಿ ಮಾರ್ಗದರ್ಶನ ನೀಡಿದ ಪ್ರತಿಯೊಬ್ಬರಿಗೂ ನಾವು ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇವೆ.

ಅಕಾಡೆಮಿಯ ವತಿಯಿಂದ 2022ರ ಜುಲೈ 19-21ರ ಅವಧಿಯಲ್ಲಿ ತುಮಕೂರಿನ ಸಿದ್ದಗಂಗಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ‘ನವೋದ್ಯಮಗಳಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ಶೀರ್ಷಿಕೆಯ ರಾಷ್ಟ್ರೀಯ ಸಮ್ಮೇಳನವನ್ನು ಪ್ರಾಯೋಜಿಸಲಾಗಿತ್ತು. ಈ ಸಮ್ಮೇಳನವು ಬಹು ಸಂಖ್ಯೆಯಲ್ಲಿ ಪ್ರತಿನಿಧಿಗಳನ್ನು ಆಕರ್ಷಿಸಿತು.  ಅಲ್ಲದೆ, 2022ರ ಸೆಪ್ಟೆಂಬರ್ 14 ರಿಂದ 16 ರವರೆಗೆ ಬೀದರ್.ನ ಕರ್ನಾಟಕ ಕಾಲೇಜಿನಲ್ಲಿ ಕನ್ನಡದಲ್ಲಿ ಮೂರು ದಿನಗಳ ವಿಜ್ಞಾನ & ತಂತ್ರಜ್ಞಾನ ಸಮ್ಮೇಳನವನ್ನು ಸಹ ಆಯೋಜಿಸಲಾಯಿತು.

2022ರ ಆಗಸ್ಟ್ 2 ರಂದು ಅಕಾಡೆಮಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಗೌರವಾನ್ವಿತ ಸಚಿವರಾದ ಡಾ. ಅಶ್ವಥ್ ನಾರಾಯಣ್.ರವರು ಉದ್ಘಾಟಿಸಿದರು. ಗೌರವಾನ್ವಿತ ಪ್ರಧಾನ ಮಂತ್ರಿಗಳ ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಪ್ರೊ. ಅಜಯ್ ಕೆ. ಸೂದ್.ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ವಿಜ್ಞಾನ & ತಂತ್ರಜ್ಞಾನದ ಮುನ್ನಡೆಗಳು ಮತ್ತು ಭವಿಷ್ಯದ ಸಾಧ್ಯತೆಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಾಲ್ಕು ಜೀವಮಾನ ಸಾಧನೆ ಪ್ರಶಸ್ತಿಗಳು ಮತ್ತು 50 ಫೆಲೋಶಿಪ್ ವಿತರಣೆಗಳೊಂದಿಗೆ ಈ ಕಾರ್ಯಕ್ರಮವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ವಿಶೇಷ ಮಹತ್ವವನ್ನು ಪಡೆದುಕೊಂಡಿತು.

ಹಿಂದಿನ ತ್ರೈಮಾಸಿಕಗಳಂತೆ, ಅಕಾಡೆಮಿಯು ತನ್ನ ಕಚೇರಿಯಲ್ಲಿ ಮತ್ತು ಹಲವಾರು ಸಂಸ್ಥೆಗಳ ಸಹಯೋಗದೊಂದಿಗೆ ರಾಜ್ಯದ ವಿವಿಧ ಸ್ಥಳಗಳಲ್ಲಿ ವಿಜ್ಞಾನ & ತಂತ್ರಜ್ಞಾನ ಕಾರ್ಯಕ್ರಮಗಳನ್ನು ಆಯೋಜಿಸಿತು. ಅಲ್ಲದೆ, ಅಕಾಡೆಮಿಯ ಪ್ರಕಟಣೆಗಳನ್ನು ರಾಜ್ಯದಾದ್ಯಂತ ಪ್ರಸರಿಸಲಾಯಿತು. ಈ ನಿಟ್ಟಿನಲ್ಲಿ ಸದಸ್ಯರಿಂದ ಪಡೆದ ಮಾರ್ಗದರ್ಶನ ಮತ್ತು ಸಲಹೆ ಸೂಚನೆಗಳನ್ನು ಕೃತಜ್ಞತೆಯಿಂದ ಸ್ಮರಿಸುತ್ತೇವೆ.

– ಎಸ್. ಅಯ್ಯಪ್ಪನ್

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.
Skip to content