ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆ

ಉದ್ದೇಶಗಳು

  • ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸುವುದು.
  • ಪ್ರಚಲಿತ ವೈಜ್ಞಾನಿಕ ವಿದ್ಯಮಾನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸುವುದು.
  • ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಸೃಜನಶೀಲತೆಯ ಬೆಳವಣಿಗೆಗೆ ಪ್ರೋತ್ಸಾಹ ನೀಡುವುದು.
  • ವಿಜ್ಞಾನ ಮತ್ತು ತಂತ್ರಜ್ಞಾನಗಳ ವೈಶಿಷ್ಟ್ಯತೆ ಮತ್ತು ಪ್ರಾಮುಖ್ಯತೆಗಳನ್ನು ಪ್ರಚುರ ಪಡಿಸುವುದು.

ಕಾರ್ಯಕ್ರಮ

  • ಈ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಅಕಾಡೆಮಿ ಕಛೇರಿಯಲ್ಲಿ ನಡೆಸಲಾಗುವುದು. ರಾಜ್ಯದ ಇತರೆ ಸ್ಥಳಗಳಲ್ಲಿ ಪದವಿ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜುಗಳ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.
  • ತಜ್ಞರು/ವಿಜ್ಞಾನಿಗಳಿಂದ ಕೇಂದ್ರ ವಿಷಯಕ್ಕೆ ಸಂಬಂಧಿಸಿದ ಎರಡು ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗುವುದು.
  • ಕೇಂದ್ರ ವಿಷಯಕ್ಕೆ ಸಂಬಂಧಿಸಿದ ಮಾದರಿ ತಯಾರಿಕೆ, ಪ್ರಬಂಧ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಕೆಳಕಂಡಂತೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು:
    • ಪ್ರಥಮ ಬಹುಮಾನ- ರೂ. 5000/-
    • ದ್ವಿತೀಯ ಬಹುಮಾನ- ರೂ. 3000/
    • ತೃತೀಯ ಬಹುಮಾನ- ರೂ. 2000/-
Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.
Skip to content