Skip to content

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ಸನ್ಮಾನ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಿಂದ ಅಕಾಡೆಮಿಯ ಪ್ರಗತಿ ಪರಿಶೀಲನೆ

2023ರ ಸೆಪ್ಟೆಂಬರ್ 21 ರಂದು ಸನ್ಮಾನ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್. ಎಸ್. ಭೋಸರಾಜುರವರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಚಟುವಟಿಕೆ ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದರು. ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ & ತಂತ್ರಜ್ಞಾನ ಇಲಾಖೆಯ ನಿರ್ದೇಶಕರು (ತಾಂತ್ರಿಕ) ಹಾಗೂ ಕೆಸ್ಟೆಪ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎ. ಬಿ. ಬಸವರಾಜುರವರು ಉಪಸ್ಥಿತರಿದ್ದರು. ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಎ. ಎಂ. ರಮೇಶ್ ರವರು ಮಾನ್ಯ ಸಚಿವರಿಗೆ ಅಕಾಡೆಮಿಯ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

Design & Maintenance : Dr. Anand R, Senior Scientific Officer, KSTA | Copyright © 2019. Karnataka Science and Technology Academy. All rights reserved.