ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

ತರಬೇತುದಾದರ ತರಬೇತಿ ಕೇಂದ್ರದ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ – ಲೈವ್ ವೆಬ್ ಕ್ಯಾಸ್ಟ್

1 min read

ತರಬೇತುದಾರರಿಗೆ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು 02ನೇ ಮಾರ್ಚ್ 2021ರ ಮಂಗಳವಾರದಂದು ಅಪರಾಹ್ನ 3.00 ಗಂಟೆಗೆ ಆಯೋಜಿಸಲಾಗಿದ್ದು, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಸಿ. ಎನ್. ಅಶ್ವಥ್ ನಾರಾಯಣರವರು ಉದ್ಘಾಟಿಸಲಿದ್ದಾರೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಯಲಹಂಕ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್. ಆರ್. ವಿಶ್ವನಾಥ್‍ರವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾನ್ಯ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸಚಿವರಾದ ಶ್ರೀ ಡಿ. ವಿ. ಸದಾನಂದಗೌಡರವರು ಹಾಗೂ ಗೌರವಾನ್ವಿತ ಅತಿಥಿಗಳಾಗಿ ಮಾಜಿ ರಾಜ್ಯಸಭಾ ಸದಸ್ಯರು ಹಾಗೂ ಇಸ್ರೋ ಸಂಸ್ಥೆಯ ನಿವೃತ್ತ ಅಧ್ಯಕ್ಷರು ಆದ ಡಾ. ಕೆ. ಕಸ್ತೂರಿರಂಗನ್‍ರವರು ಆಗಮಿಸಲಿದ್ದಾರೆ.

ತರಬೇತುದಾರರಿಗೆ ತರಬೇತಿ ಕೇಂದ್ರ

ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದ ಮುಂಚೂಣಿ ಕ್ಷೇತ್ರಗಳು ಹಾಗೂ ಇತ್ತೀಚಿನ ಬೆಳವಣಿಗೆಯ ಬಗ್ಗೆ ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ಮೌಲ್ಯದಾರಿತ ತರಬೇತಿ ನೀಡುವ ಕೇಂದ್ರವಾಗಿ ಕಾರ್ಯನಿರ್ವಹಿಸುವ, ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ ಪರಿಣಾಮಕಾರಿ ಬೋಧನಾ ವ್ಯವಸ್ಥೆ ಮತ್ತು ಕಾರ್ಯತಂತ್ರವನ್ನು ವಿನ್ಯಾಸಗೊಳಿಸುವುದು ಹಾಗೂ ಬೋಧಕರಲ್ಲಿ ಕೌಶಲ್ಯ ವೃದ್ಧಿ ಹಾಗೂ ಬದಲಾಗುತ್ತಿರುವ ಪಠ್ಯಕ್ರಮಗಳ ಅಗತ್ಯಗಳಿಗನುಸಾರ ವಿಶೇಷ ತರಬೇತಿಯನ್ನು ನೀಡುವ ಉದ್ದೇಶದಿಂದ “ತರಬೇತುದಾರರ ತರಬೇತಿ ಕೇಂದ್ರವನ್ನು” ಸ್ಥಾಪಿಸಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ

ಅಕಾಡೆಮಿಯು ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆ ನೀಡಿದ ನಾಡಿನ ಶ್ರೇಷ್ಠ ವಿಜ್ಞಾನಿ/ತಂತ್ರಜ್ಞಾನಿಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕನ್ನಡದಲ್ಲಿ ವಿಜ್ಞಾನ ಸಂವಹನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿಜ್ಞಾನ ಸಂವಹನಕಾರರಿಗೆ ಜೀವಮಾನ ಸಾಧನೆ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಾ ಬಂದಿದೆ. 2019 ಮತ್ತು 2020ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ಅಲ್ಲದೆ, ವಿಜ್ಞಾನ ಮತ್ತು ತಂತ್ರಜ್ಞಾನ, ವಿಜ್ಞಾನ ಸಂವಹನ / ಜನಪ್ರಿಯಗೊಳಿಸುವಿಕೆ ಮತ್ತು ಪ್ರಸಾರಕ್ಕೆ ಶಿಕ್ಷಣ ತಜ್ಞರು, ಸಂಶೋಧಕರು, ಎಂಜಿನಿಯರ್‌ಗಳು, ಸಂಸ್ಥೆಗಳು ಮತ್ತು ಉದ್ಯಮದಲ್ಲಿರುವ ತಂತ್ರಜ್ಞರು ಹಾಗೂ ಭರವಸೆಯ ಯುವ ವೃತ್ತಿಪರರ ಕೊಡುಗೆಗಳನ್ನು ಗುರುತಿಸಲು ಅಕಾಡೆಮಿಯ ಗೌರವ ಫೆಲೋಶಿಪ್ ಗಳನ್ನು ನೀಡುತ್ತಿದೆ.

ಸಮಾರಂಭದ ಲೈವ್ ವೆಬ್ ಕ್ಯಾಸ್ಟ್

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Copyright © 2019. Karnataka Science and Technology Academy. All rights reserved.
Skip to content